ಏನೇ ಮಾಡಿದರೂ

 ಏನೇ ಮಾಡಿದರೂ 



ಮೂಲ: ಮ್ಯಾಕ್ಸ್ ಏರ್ಮನ್
ಕನ್ನಡಕ್ಕೆ: ಸಿ. ಪಿ. ರವಿಕುಮಾರ್

ಏನೇ ಮಾಡಿದರೂ ಮಾಡದಿದ್ದರೂ ನೀನು
ಅನುಸರಿಸಬೇಕಾದ ವ್ರತವೊಂದಿದೆ: ಸಂತೋಷ.
ಆಗಾಗ ಒಮ್ಮೆ ಯಾವ ಭಿಡೆಯೂ ಇಲ್ಲದೆ
ಮಾಡು ಜೋರಾಗಿ ನಕ್ಕುಬಿಡುವ ಕೆಲಸ.

ಎಷ್ಟೇ ಶಪಿಸಿದರೂ ಜಗತ್ತಿನ ಕೆಡುಕನ್ನು ನೀನು,
ನೆನಪಿರಲಿ ಜಗತ್ತು ಕೆಟ್ಟುಹೋಗಿಲ್ಲ ಪೂರ್ತಿ;
ಎಲ್ಲೋ ಮಕ್ಕಳು ಇನ್ನೂ ಆಟವಾಡುತ್ತಿವೆ
ನಿನ್ನ ವೃದ್ಧಾಪ್ಯವೂ ಮಕ್ಕಳಾಟಗಳ ಕಲಿಯಲಿ;
ನೆನಪಿರಲಿ ಹೆಣ್ಣುಗಳು ಇನ್ನೂ ನಲಿಯುತ್ತವೆ
ಗಂಡುಗಳ ಧೀರೋದಾತ್ತ ಹೃದಯಗಳಲ್ಲಿ.

ನೆನಪಿರಲಿ ಎಷ್ಟೇ ಅಲೆದಾಡಿದರೂ ಮಾನವ
ಎಲ್ಲೆಲ್ಲೂ ತುಳಿಯುತ್ತಾ ಅವಿಶ್ರಾಂತ ಹೆಜ್ಜೆ
ಜಗದ ಬಿರುಗಾಳಿ ಮಳೆ ಸಿಡಿಲು ಮಿಂಚುಗಳಿಂದ
ನೀಡುವುದು ಒಲವೆಂಬ ಮನೆ ನಿನಗೆ ರಕ್ಷೆ.




ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಆಡು ಮುಟ್ಟದ ಸೊಪ್ಪಿಲ್ಲ (ಹರಟೆ)