ಕಟ್ಟುವೆನು ನಾನು
ಕನ್ನಡಕ್ಕೆ: ಸಿ.ಪಿ. ರವಿಕುಮಾರ್
ನೋಡಿ ನಾನು ಮನೆಯಲ್ಲೇ ಏನೇನು ಕಟ್ಟಬಲ್ಲೆ!
ಅರಮನೆ, ದೇವಸ್ಥಾನ, ಕೋಟೆ ಕೊತ್ತಲ ಕಿಲ್ಲೆ!
ಸುರಿದುಕೊಳ್ಳಲಿ ಎಷ್ಟು ಸುರಿಯುತ್ತದೋ ಮಳೆ,
ನಾನಂತೂ ಕಟ್ಟುವ ಆಟ ಆಡುವೆ ಮನೆಯಲ್ಲೇ!
ಸುರಿದುಕೊಳ್ಳಲಿ ಎಷ್ಟು ಸುರಿಯುತ್ತದೋ ಮಳೆ,
ನಾನಂತೂ ಕಟ್ಟುವ ಆಟ ಆಡುವೆ ಮನೆಯಲ್ಲೇ!
ಮೇಜು ಕುರ್ಚಿಗಳೆಲ್ಲ ಆಗಿ ಬೆಟ್ಟದ ಸಾಲು,
ಕೆಳಗೆ ಹಾಸಿದ ಚಾಪೆ ಆಗುವುದು ಕಡಲು!
ಗೋಡೆ ಕಟ್ಟುವೆ ಸುತ್ತ ಪುಸ್ತಕಗಳ ಪೇರಿಸಿ,
ಕಟ್ಟುವೆನು ಗುಡಿಗೋಪುರ, ಧ್ವಜವ ಮೇಲಿರಿಸಿ!
ಕೆಳಗೆ ಹಾಸಿದ ಚಾಪೆ ಆಗುವುದು ಕಡಲು!
ಗೋಡೆ ಕಟ್ಟುವೆ ಸುತ್ತ ಪುಸ್ತಕಗಳ ಪೇರಿಸಿ,
ಕಟ್ಟುವೆನು ಗುಡಿಗೋಪುರ, ಧ್ವಜವ ಮೇಲಿರಿಸಿ!
ನಾಲ್ಕು ಕಂಬಗಳಿವೆ ನನ್ನ ಪುಸ್ತಕದರಮನೆಗೆ,
ಚಾದರದ ಗೋಪುರವನೆಬ್ಬಿಸುವೆ ಕೊನೆಗೆ,
ಮೇಲಿಂದ ರಾಜ ಮೆಟ್ಟಿಲು ಇಳಿಯುತ್ತಾ ಬಂದರೆ,
ಸಿದ್ಧವಾಗಿದೆ ಕೆಳಗೆ ಜಹಜುಗಳ ಬಂದರೇ!
ಚಾದರದ ಗೋಪುರವನೆಬ್ಬಿಸುವೆ ಕೊನೆಗೆ,
ಮೇಲಿಂದ ರಾಜ ಮೆಟ್ಟಿಲು ಇಳಿಯುತ್ತಾ ಬಂದರೆ,
ಸಿದ್ಧವಾಗಿದೆ ಕೆಳಗೆ ಜಹಜುಗಳ ಬಂದರೇ!
ಅಮ್ಮನ ಪಾತ್ರೆಗಳೆಲ್ಲವೂ ನನ್ನ ಪಾಲು!
ಸಾಲಾಗಿ ನಿಂತಿರುವ ಜಹಜುಗಳ ಸಾಲು!
ಕಡಲಲ್ಲಿ ತೇಲುತ್ತಿವೆ ಒಂದೆರಡು ಬೋಟು,
ಒಂದು ಅಕ್ಕನ ಪರ್ಸ್, ಒಂದು ತಾತನ ಕೋಟು!!
ಸಾಲಾಗಿ ನಿಂತಿರುವ ಜಹಜುಗಳ ಸಾಲು!
ಕಡಲಲ್ಲಿ ತೇಲುತ್ತಿವೆ ಒಂದೆರಡು ಬೋಟು,
ಒಂದು ಅಕ್ಕನ ಪರ್ಸ್, ಒಂದು ತಾತನ ಕೋಟು!!
ಗುಡಿಯ ಸುತ್ತಲೂ ದೀಪ ಹಚ್ಚಿಟ್ಟ ಹಾಗೆ
ಹೇಗೆ ಮಾಡುವುದೆಂದು ಹೊಳೆದದ್ದೇ ನನಗೆ
ತಂದು ಅಜ್ಜಿಯ ಭಾರೀ ಜರತಾರಿ ಸೀರೆ
ಸುತ್ತಿರುವೆ, ನೋಡೋಣ ಏನನ್ನುತಾರೆ!
ಹೇಗೆ ಮಾಡುವುದೆಂದು ಹೊಳೆದದ್ದೇ ನನಗೆ
ತಂದು ಅಜ್ಜಿಯ ಭಾರೀ ಜರತಾರಿ ಸೀರೆ
ಸುತ್ತಿರುವೆ, ನೋಡೋಣ ಏನನ್ನುತಾರೆ!
ಮುಗಿಯಿತಲ್ಲ ಆಟ,ಕಟ್ಟಿದ್ದು ಸಾಕು
ಈಗ ಕಟ್ಟಿದ್ದನ್ನು ಕೆಡವಲೇ ಬೇಕು
ಕಟ್ಟಲು ಬೇಕಾಯಿತು ಒಂದೆರಡು ಗಂಟೆ
ಕೆಡವಲು ಅಷ್ಟೆಲ್ಲಾ ವ್ಯವಧಾನ ಉಂಟೇ!
ಈಗ ಕಟ್ಟಿದ್ದನ್ನು ಕೆಡವಲೇ ಬೇಕು
ಕಟ್ಟಲು ಬೇಕಾಯಿತು ಒಂದೆರಡು ಗಂಟೆ
ಕೆಡವಲು ಅಷ್ಟೆಲ್ಲಾ ವ್ಯವಧಾನ ಉಂಟೇ!
ಕೋಣೆಯ ತುಂಬಾ ಬಿದ್ದಿರುವ ರಾಶಿ ಸಾಮಾನು,
ನೋಡುತ್ತಾ ಕಲ್ಪಿಸಿಕೊಳ್ಳುವೆ ಕಟ್ಟಬಹುದು ಬೇರೇನು,
ನಡೆದೇ ಇರುತ್ತದೆ ಕೆಡವಿ ಕಟ್ಟುವ ಆಟ,
ಹೊಟ್ಟೆ ಹಾಕುತ್ತಿದೆ ತಾಳ, ಕರೆಯುತ್ತಿದೆ ಪಾಠ!
ನೋಡುತ್ತಾ ಕಲ್ಪಿಸಿಕೊಳ್ಳುವೆ ಕಟ್ಟಬಹುದು ಬೇರೇನು,
ನಡೆದೇ ಇರುತ್ತದೆ ಕೆಡವಿ ಕಟ್ಟುವ ಆಟ,
ಹೊಟ್ಟೆ ಹಾಕುತ್ತಿದೆ ತಾಳ, ಕರೆಯುತ್ತಿದೆ ಪಾಠ!
Is it Block City?
ಪ್ರತ್ಯುತ್ತರಅಳಿಸಿಹೌದು.
ಪ್ರತ್ಯುತ್ತರಅಳಿಸಿWhat are you able to build with your blocks?
Castles and palaces, temples and docks.
Rain may keep raining, and others go roam,
But I can be happy and building at home.
Let the sofa be mountains, the carpet be sea,
There I'll establish a city for me:
A kirk and a mill and a palace beside,
And a harbor as well where my vessels may ride.
Great is the palace with pillar and wall,
A sort of a tower on top of it all,
And steps coming down in an orderly way
To where my toy vessels lie safe in the bay.
This one is sailing and that one is moored:
Hark to the song of the sailors on board!
And see on the steps of my palace, the kings
Coming and going with presents and things!
Now I have done with it, down let it go!
All in a moment the town is laid low.
Block upon block lying scattered and free,
What is there left of my town by the sea?
Yet as I saw it, I see it again,
The kirk and the palace, the ships and the men,
And as long as I live and where'er I may be,
I'll always remember my town by the sea.