ನಮ್ಮ ಮಕ್ಕಳು

ನಮ್ಮ ಮಕ್ಕಳು

ಮೂಲ: ನಿಕೊಲೆಟ್ ಸೌಡರ್ 

ಕನ್ನಡಕ್ಕೆ: ಸಿ ಪಿ ರವಿಕುಮಾರ್


ಹೇಗಿರಲಿ ನಮ್ಮ ಮಕ್ಕಳ ಪಾಲನೆ  ಅಂದರೆ ಅವರು
ಪ್ರೀತಿಸಲಿ ಯಾರೂ ಪ್ರೀತಿಸದ ವಸ್ತುಗಳನ್ನು ಕೂಡಾ.
ಉದಾಹರಣೆಗೆ ಕಾಡು ಸೇವಂತಿಗೆ ಹೂವುಗಳು,
ಹರಿದಾಡುವ ಹುಳಹುಪ್ಪಟೆ ಮತ್ತು ಜೇಡ.

ಅವರಿಗಿರಲಿ
ಗುಲಾಬಿಗೆ ಮುಳ್ಳಿನ ಅಗತ್ಯವಿದೆ ಎಂಬ ಪರಿಜ್ಞಾನ,
ಮಳೆಗಾಲದ ದಿನಗಳನ್ನೂ
ಬೇಸಗೆಯ ದಿನಗಳಷ್ಟೇ ಆನಂದದಿಂದ
ಸ್ವೀಕರಿಸುವ ಸ್ವಭಾವ.

ಬೆಳೆದು ದೊಡ್ದವರಾದ ನಂತರ 
ಬಂದಾಗ ಒಂದು ದಿನ
ಧ್ವನಿ ಇಲ್ಲದವರ ಪರವಾಗಿ ಮಾರಾಡುವ ಸರದಿ
ಬರಲಿ ಅವರಿಗೆ ಎಳೆಯ ವಸ್ತುಗಳನ್ನು 
ಕಾಪಾಡಿದ ನೆನಪು
ಮತ್ತು ಮಾತಾಡಲು ತಾವೇ ತೆರೆಯಲಿ ತುಟಿ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಕತ್ತಲೆ ಬೆಳಕು - ಶ್ರೀರಂಗರ ನಾಟಕ