ವೃದ್ಧ ನಿರುದ್ವೇಗಿಯ ಪ್ರಾರ್ಥನೆ

 



ಮೂಲ: ಎಮಿಲಿ ಬ್ರಾಂಟಿ

ಕನ್ನಡಕ್ಕೆ:  ಸಿ ಪಿ ರವಿಕುಮಾರ್ 


ಸಂಪತ್ತನ್ನು ಕಂಡರೆ ನನಗೆ ಅಷ್ಟಕ್ಕಷ್ಟೇ
ಪ್ರೇಮವೆಂದರೆ ನಗುವೆ ತಿರಸ್ಕಾರದ ನಗೆ
ಕೀರ್ತಿಗಾಗಿ ಕಾಮಿಸಿದೆನಾದರೂ ಅದು 
ಬೆಳಗಾಗ ಲಯವಾಗುವ ಕನಸಿನ ಹಾಗೆ

ಈಗ ನಾನು ಪ್ರಾರ್ಥಿಸಲೆಂದು ಬಾಯ್ತೆರೆದರೆ
ಆಗ ತುಟಿಗಳ ಮೇಲೆ ಬರುವ ಮಾತೊಂದೇ :
ನನಗೀಗ ಕೇಳುವುದೋ ಯಾವ ಹೃದಯದ ತುಡಿತ
ಅದನ್ನು ಹಾಗೇ ಉಳಿಸಿ ನೀಡು ಮುಕ್ತಿ ನನಗೆ!

ಬಿರುಸಾಗಿ ಉರುಳುತ್ತ ನನ್ನ ದಿನಗಳು ತಮ್ಮ
ಗುರಿಯತ್ತ ಧಾವಿಸುತ್ತಿರಲು ನಾನು ಬೇಡುವುದು ಇಷ್ಟೇ
ಬದುಕು ಸಾವುಗಳಲ್ಲಿ ನಾನು ಮುಕ್ತಳಾಗಿರುವಂತೆ
ಮತ್ತು ಸಹಿಸುವ ಶಕ್ತಿ ನನಗೆ ನೀಡು ಎಂದಷ್ಟೇ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಆಡು ಮುಟ್ಟದ ಸೊಪ್ಪಿಲ್ಲ (ಹರಟೆ)