ಆಲೋಚನೆಗಳು

 ಆಲೋಚನೆಗಳು



ಮೂಲ ಕವಿತೆ: ಹೆನ್ರಿ ವಾನ್ ಡೈಕ್ 

ಅನುವಾದ: ಸಿ ಪಿ ರವಿಕುಮಾರ್

ನಮ್ಮ  ಆಲೋಚನೆಗಳಿಗಿದೆ ಶರೀರ, ರೆಕ್ಕೆ ಮತ್ತು ಶ್ವಾಸ
ಅವು ವಸ್ತುಗಳೇ ಎಂಬುದು ನನ್ನ ವಿಶ್ವಾಸ
ಕಳಿಸಿದಾಗ ಆಲೋಚನೆಗಳನ್ನು ಜಗತ್ತಿಗೆ ನಾವು
ಪರಿಣಾಮಗಳು ಎರಡು: ನಲಿವು ಇಲ್ಲವೆ ನೋವು.

ನಮ್ಮ ಮನದಾಳದಲ್ಲಿ ಹುಟ್ಟಿದ ರಹಸ್ಯ ಆಲೋಚನೆ
ಹೋಗಿ ಮುಟ್ಟುವುದು ಜಗತ್ತಿನ ದೂರದ ಕೊನೆ
ಹೋದ ಕಡೆಗೆಲ್ಲಾ ಅದರ ಹೆಜ್ಜೆ ಗುರುತಿನ ಹಾಗೆ
ಶುಭೇಚ್ಛೆಯ ವೃಷ್ಟಿ  ಅಥವಾ ಶಾಪದ ಸುಡುಬೇಗೆ.

ನಮ್ಮ ಭವಿಷ್ಯವನ್ನು ಕಟ್ಟಿಕೊಳ್ಳುತ್ತೇವೆ ಅರಿವಿಲ್ಲದೆ
ಇಡುತ್ತಾ ಒಂದೊಂದೇ ಆಲೋಚನೆಯ ಇಟ್ಟಿಗೆ
ವಿಶ್ವದ ನಿರ್ಮಾಣವಾಗಿದ್ದೂ  ಹೀಗೇ 
ವಿಧಿ ಎಂಬುದು ಇನ್ನೊಂದು ಹೆಸರು ಆಲೋಚನೆಗೆ.

ನಿನ್ನ ಭವಿಷ್ಯವನ್ನು ಆಯ್ದುಕೋ. ಅನಂತರ ನಿರೀಕ್ಷಿಸುವುದಷ್ಟೇ ಕೆಲಸ.
ಪ್ರೇಮ ಕರೆತರುವುದು ಪ್ರೇಮ, ಕರೆತರುವುದು ದ್ವೇಷವನ್ನು ದ್ವೇಷ 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಕತ್ತಲೆ ಬೆಳಕು - ಶ್ರೀರಂಗರ ನಾಟಕ