ಇಷ್ಟೆಲ್ಲದರ ನಡುವೆ
ಇಷ್ಟೆಲ್ಲದರ ನಡುವೆ
ಮೂಲ: ಟಾಮ್ ಹಿರಾನ್ಸ್
ಇಷ್ಟೆಲ್ಲದರ ನಡುವೆ ಅರಳುತ್ತವೆ ಹೂ ಯಥಾಪ್ರಕಾರ
ಚಂದ್ರೋದಯ ಸೂರ್ಯೋದಯಕ್ಕಿಲ್ಲ ಸಂಚಕಾರ
ಮಕ್ಕಳು ಮುಗುಳ್ನಗುತ್ತವೆ ದೊಡ್ಡದಾಗಿ ನಿಷ್ಕಾರಣ
ಮತ್ತು ಅಸಂಭವ ದಾಟಿ ಎರಡು ಹೃದಯಗಳ ಮಿಲನ
ಚಂದ್ರೋದಯ ಸೂರ್ಯೋದಯಕ್ಕಿಲ್ಲ ಸಂಚಕಾರ
ಮಕ್ಕಳು ಮುಗುಳ್ನಗುತ್ತವೆ ದೊಡ್ಡದಾಗಿ ನಿಷ್ಕಾರಣ
ಮತ್ತು ಅಸಂಭವ ದಾಟಿ ಎರಡು ಹೃದಯಗಳ ಮಿಲನ
ಅಪರಿಚಿತರು ಹಂಚಿಕೊಳ್ಳುತ್ತಾರೆ ಕಡ್ಡಿಪೆಟ್ಟಿಗೆ, ನಗೆ
ನೀರಿನ ಮೇಲೆ ಆಡುತ್ತವೆ ಬೆಳಕಿನ ಕೋಲುಗಳು ಮೆಲ್ಲಗೆ
ಅನಿರೀಕ್ಷಿತ ಬೀದಿಗಳಲ್ಲಿ ಅರಳುತ್ತದೆ ಔದಾರ್ಯ
ನೆರೆ, ಭೂಕಂಪನಗಳ ನಡುವೆ ಪುನರ್ವಸತಿ ಕಾರ್ಯ
ಬದುಕಿನ ಕಡೆಗೆ ವಾಲುತ್ತದೆ ಜೀವನ
ಎಲ್ಲವನ್ನೂ ಸಾವು ತೆಗೆದುಕೊಂಡರೂ ಆಫೋಷನ
ನಡುವೆ ಇದ್ದವು ಎಷ್ಟೊಂದು ಅಮೂಲ್ಯ ಕ್ಷಣ
ಎಲ್ಲವೂ ಪ್ರಕಾಶಮಾನವಾಗಿ ಜಗಮಗ
ನಾವು ಮತ್ತೊಮ್ಮೆ ನಮ್ಮ ಈ ಜಗ
ವನ್ನು ಪ್ರೀತಿಸುವಂತೆ ಇತ್ತು ಜೀವನ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ