ನನ್ನ ಬದುಕಿದೆಯಲ್ಲ
ನನ್ನ ಬದುಕಿದೆಯಲ್ಲ ಮೂಲ.: ಲಿಯೋ ಮಾರ್ಕ್ಸ್ ಅನುವಾದ: ಸಿ ಪಿ ರವಿಕುಮಾರ್ ನನ್ನ ಈ ಬದುಕಿದೆಯಲ್ಲ ಅದೊಂದೇ ನನ್ನದೆಂಬುದು, ಮತ್ತು ಆ ಬದುಕು ನಿನ್ನದು. ಈ ಬದುಕಿನ ಬಗ್ಗೆ ನನಗಿರುವ ಆಸೆ ನಿನ್ನದು, ನಿನ್ನದು ನಿನ್ನದು! ನಾನು ನಿದ್ರಿಸಬಹುದು ನಾನು ವಿರಮಿಸಬಹುದು ಸಾವು ಕೂಡಾ ಒಂದು ಮಧ್ಯಂತರ ವಿರಾಮ. ಏಕೆಂದರೆ ಹಸಿರು ಉದ್ದ ಹುಲ್ಲಿನೊಳಗೆ ಬೆರೆತ ನನ್ನ ಮನಃಶಾಂತಿ ನಿನ್ನದು, ನಿನ್ನದು, ನಿನ್ನದು!