ವ್ಯೋಮದಲ್ಲೊಂದು ಹಾಡು
ವ್ಯೋಮದಲ್ಲೊಂದು ಹಾಡು ಮೂಲ: ಏಡ್ರಿಯನ್ ಮಿಚೆಲ್ ಕನ್ನಡಕ್ಕೆ: ಸಿ. ಪಿ. ರವಿಕುಮಾರ್ ಮಾನವನು ಹಾರಿ ಆಕಾಶದಾಚೆಗೆ ಹೋದ ಘಳಿಗೆ ಹಿಂತಿರುಗಿ ನೋಡಿದನು ಭೂಮಿಯ ನೀಲ ಕಣ್ಣೊಳಗೆ ನಿನ್ನ ಕಣ್ಣುಗಳೇಕೆ ಕಡುನೀಲಿ ಎಂದು ಕೇಳಲು ಉತ್ತರ ಬಂತು: ಕಣ್ಣೀರು ತುಂಬಿರುವ ಕಡಲು ಕಡಲಿನಲ್ಲಿ ಏಕಿದೆ ಅಷ್ಟೊಂದು ಕಣ್ಣೀರು? ನಾನು ಅತ್ತಿದ್ದೇನೆ ಸಂವತ್ಸರ ಸಹಸ್ರಾರು. ವ್ಯೋಮದಲ್ಲಿ ಸಾಗುತ್ತಾ ಏಕೆ ಕಣ್ಣೀರು ಹಾಕುವೆ? ಏಕೆಂದರೆ ನಾನು ಮಾನವಕುಲಕ್ಕೆ ತಾಯಾಗಿರುವೆ.