ಪೋಸ್ಟ್‌ಗಳು

books ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ನನ್ನ ಪುಸ್ತಕಗಳು ಹೋದ ಕಡೆ

ಇಮೇಜ್
ನನ್ನ ಪುಸ್ತಕಗಳು ಹೋದ ಕಡೆ ಮೂಲ: ಡಬ್ಲ್ಯು ಬಿ ಯೇಟ್ಸ್ ಅನುವಾದ: ಸಿ ಪಿ ರವಿಕುಮಾರ್ ನಾನು ಆರಿಸಿಕೊಂಡ ಎಲ್ಲಾ ಪದ ಸಮುಚ್ಚಯ ಮತ್ತು ನಾನು ಬರೆದ ಸಮಸ್ತ ಪದಗಳು ಬಿಚ್ಚಿ ರೆಕ್ಕೆಗಳನ್ನು ಹಾರಬೇಕು ನಿರಾಯಾಸ ವಿರಮಿಸಕೂಡದು ಎಲ್ಲೂ ಹಾರಾಟದ ನಡುವೆ, ಸೇರುವವರೆಗೂ ನಿನ್ನ ದುಃಖಿ ಹೃದಯವನ್ನು. ಅಲ್ಲಿ ನಿನಗಾಗಿ ಹಾಡಬೇಕು ರಾತ್ರಿಯಲ್ಲಿ, ದೂರದಲ್ಲಿ ಎಲ್ಲಿ ಚಲಿಸುವುದೋ ನೀರು ಕಾರ್ಮೋಡದಿಂದ ಕಪ್ಪಾಗಿ ಅಥವಾ ನಕ್ಷತ್ರದೀಪ್ತವಾಗಿ.

ಕಟ್ಟುವೆನು ನಾನು

ಇಮೇಜ್
ಸ್ಫೂರ್ತಿ: ರಾಬರ್ಟ್ ಲೂಯಿ ಸ್ಟೀವನ್ಸನ್ ಕನ್ನಡಕ್ಕೆ: ಸಿ.ಪಿ. ರವಿಕುಮಾರ್ ನೋಡಿ ನಾನು ಮನೆಯಲ್ಲೇ ಏನೇನು ಕಟ್ಟಬಲ್ಲೆ! ಅರಮನೆ, ದೇವಸ್ಥಾನ, ಕೋಟೆ ಕೊತ್ತಲ ಕಿಲ್ಲೆ! ಸುರಿದುಕೊಳ್ಳಲಿ ಎಷ್ಟು ಸುರಿಯುತ್ತದೋ ಮಳೆ, ನಾನಂತೂ ಕಟ್ಟುವ ಆಟ ಆಡುವೆ ಮನೆಯಲ್ಲೇ! ಮೇಜು ಕುರ್ಚಿಗಳೆಲ್ಲ ಆಗಿ ಬೆಟ್ಟದ ಸಾಲು, ಕೆಳಗೆ ಹಾಸಿದ ಚಾಪೆ ಆಗುವುದು ಕಡಲು! ಗೋಡೆ ಕಟ್ಟುವೆ ಸುತ್ತ ಪುಸ್ತಕಗಳ ಪೇರಿಸಿ, ಕಟ್ಟುವೆನು ಗುಡಿಗೋಪುರ, ಧ್ವಜವ ಮೇಲಿರಿಸಿ! ನಾಲ್ಕು ಕಂಬಗಳಿವೆ ನನ್ನ ಪುಸ್ತಕದರಮನೆಗೆ, ಚಾದರದ ಗೋಪುರವನೆಬ್ಬಿಸುವೆ ಕೊನೆಗೆ, ಮೇಲಿಂದ ರಾಜ ಮೆಟ್ಟಿಲು ಇಳಿಯುತ್ತಾ ಬಂದರೆ, ಸಿದ್ಧವಾಗಿದೆ ಕೆಳಗೆ ಜಹಜುಗಳ ಬಂದರೇ! ಅಮ್ಮನ ಪಾತ್ರೆಗಳೆಲ್ಲವೂ ನನ್ನ ಪಾಲು! ಸಾಲಾಗಿ ನಿಂತಿರುವ ಜಹಜುಗಳ ಸಾಲು! ಕಡಲಲ್ಲಿ ತೇಲುತ್ತಿವೆ ಒಂದೆರಡು ಬೋಟು, ಒಂದು ಅಕ್ಕನ ಪರ್ಸ್, ಒಂದು ತಾತನ ಕೋಟು!! ಗುಡಿಯ ಸುತ್ತಲೂ ದೀಪ ಹಚ್ಚಿಟ್ಟ ಹಾಗೆ ಹೇಗೆ ಮಾಡುವುದೆಂದು ಹೊಳೆದದ್ದೇ ನನಗೆ ತಂದು ಅಜ್ಜಿಯ ಭಾರೀ ಜರತಾರಿ ಸೀರೆ ಸುತ್ತಿರುವೆ, ನೋಡೋಣ ಏನನ್ನುತಾರೆ! ಮುಗಿಯಿತಲ್ಲ ಆಟ,ಕಟ್ಟಿದ್ದು ಸಾಕು ಈಗ ಕಟ್ಟಿದ್ದನ್ನು ಕೆಡವಲೇ ಬೇಕು ಕಟ್ಟಲು ಬೇಕಾಯಿತು ಒಂದೆರಡು ಗಂಟೆ ಕೆಡವಲು ಅಷ್ಟೆಲ್ಲಾ ವ್ಯವಧಾನ ಉಂಟೇ! ಕೋಣೆಯ ತುಂಬಾ ಬಿದ್ದಿರುವ ರಾಶಿ  ಸಾಮಾನು, ನೋಡುತ್ತಾ ಕಲ್ಪಿಸಿಕೊಳ್ಳುವೆ ಕಟ್ಟಬಹುದು ಬೇರೇನು, ನಡೆದೇ ಇರುತ್ತದೆ ಕೆಡವಿ ಕಟ್ಟುವ ಆಟ,  ಹೊಟ್ಟೆ ಹಾಕುತ್ತಿದೆ ತಾಳ, ಕರೆಯುತ...

ಕಾವ್ಯಕಲೆಯ ಮೇಲೊಂದು ಟಿಪ್ಪಣಿ

ಇಮೇಜ್
ಮೂಲ: ಡೈಲಾನ್ ಥಾಮಸ್ ಕನ್ನಡಕ್ಕೆ: ಸಿ. ಪಿ. ರವಿಕುಮಾರ್ ಕನಸಿನಲ್ಲೂ ನಾನು ಎಣಿಸಿರಲಿಲ್ಲ: ಪುಸ್ತಕಗಳ ಹೊದ್ದಿಕೆಗಳ ನಡುವಣ ಜಗತ್ತಿನಲ್ಲಿ  ನಡೆಯುತ್ತಿರಬಹುದು ಏನೆಲ್ಲ, ಪದಗಳ ಉಷ್ಣ-ಶೈತ್ಯ ಬಿರುಗಾಳಿಗಳು, ಅದೆಂಥ ಪರಮಶಾಂತಿ, ಅದೆಂಥ ಗಟ್ಟಿಯಾದ ನಗು, ಇನ್ನೂ ಇಂಥವೇ ಮತ್ತು ಕಣ್ಣುಕುಕ್ಕುವ ಬೆಳಕು ಪುಟಗಳ ಮೇಲೆಲ್ಲಾ ಚೆಲ್ಲಾಪಿಲ್ಲಿಯಾಗಿ, ಚೂರುಚೂರಾಗಿ ಪದ, ಪದ, ಮತ್ತು ಇನ್ನಷ್ಟು ಪದಗಳಾಗಿ ಪ್ರತಿಯೊಂದೂ ಪಡೆದುಕೊಂಡು ಅಮರತ್ವ ಬಾಳುತ್ತಾ ಅನಂತಕಾಲಕ್ಕೂ, ಪ್ರತಿಯೊಂದಕ್ಕೂ ತನ್ನದೇ ಆನಂದ, ವೈಭೋಗ,ವೈಚಿತ್ರ್ಯ,ಬೆಳಕು.