ಪೋಸ್ಟ್‌ಗಳು

message ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಧೂಳು

ಇಮೇಜ್
 ಮೂಲ: ಡೋರಿಯನ್ ಲಾ ಕನ್ನಡಕ್ಕೆ: ಸಿ ಪಿ ರವಿಕುಮಾರ್ ನೆನ್ನೆ ರಾತ್ರಿ ಯಾರೋ ನನ್ನೊಂದಿಗೆ ಮಾತಾಡಿದರು. ಅವರ  ಮಾತು ಮನಸ್ಸಿಗೆ ನಾಟಿತು. ಆಡಿದ್ದು ಒಂದೆರಡೇ ಆದರೂ ನಿಜ ಹೇಳುತ್ತಿದ್ದರು ಎಂದು ನಾನು ಗುರುತಿಸಿದೆ. ಕೂಡಲೇ ಮೇಲೆದ್ದು ಬರೆದಿಟ್ಟುಕೊಳ್ಳಬೇಕು ಎನ್ನಿಸಿತು ಆದರೆ ತುಂಬಾ ತಡವಾಗಿತ್ತು.   ಇಡೀ ದಿವಸ ತೋಟದಲ್ಲಿ ಕಲ್ಲುಗಳನ್ನು ಜರುಗಿಸುತ್ತಾ ದುಡಿದು ದಣಿದಿದ್ದೆ. ಈಗ ನನಗೆ ನೆನಪಿರುವುದು ಮಾತಿನ ಪರಿಮಳ ಮಾತ್ರ ಇಲ್ಲ, ಊಟದ ವ್ಯಂಜನದಂತಲ್ಲ,  ಘಾಟು ಅಥವಾ ಸಿಹಿಯಲ್ಲ, ಸಣ್ಣ ಪುಡಿಯಂತೆ, ಧೂಳಿನ ಹಾಗೆ. ಕೇಳಿ ನಾನೇನೂ ಉಬ್ಬಲಿಲ್ಲ ಅಥವಾ ಹೆದರಿ ಕೊಳ್ಳಲಿಲ್ಲ. ನಾನು ಸಂಪೂರ್ಣ ಎಚ್ಚೆತ್ತುಕೊಂಡು  ಗಮನವಿಟ್ಟು ಕೇಳುತ್ತಿದ್ದೆ. ಕೆಲವು ಸಲ ಹಾಗೇ. ದೇವರು ಕಪ್ಪು ರೆಕ್ಕೆಯನ್ನು ತೊಟ್ಟು, ಬೆಳಕಿನಂತೆ ಜಗಜಗಿಸುತ್ತಾ ನಿಮ್ಮ ಕಿಟಕಿಯ ಎದುರು ಬಂದು ನಿಲ್ಲುತ್ತಾನೆ. ಆದರೆ ತೆರೆಯಲು ನಿಮಗೆ ವಿಪರೀತ ದಣಿವು.